06/11/2025
ಬೆಂಗಳೂರಿನ ಮಹಾತ್ಮ ಗಾಂಧಿ ರಸ್ತೆಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಹಾಗೂ 5ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಿದ ಜಯಕರ್ನಾಟಕ ಜನಪರ ವೇದಿಕೆ.
ಆತ್ಮೀಯರೆ,
ನಮ್ಮೆಲ್ಲರ ಹೆಮ್ಮೆಯ ನಾಯಕರಾದ ಶ್ರೀ ಬಿ.ಗುಣರಂಜನ್ ಶೆಟ್ಟಿಯವರ ನೇತೃತ್ವದಲ್ಲಿ,
ಬೆಂಗಳೂರಿನ, ಎಂ.ಜಿ.ರಸ್ತೆಯ, ಬಾರ್ಟನ್ ಸೆಂಟರ್ನ ಅಂಗಳದಲ್ಲಿ, ಜಯಕರ್ನಾಟಕ ಜನಪರ ವೇದಿಕೆ ವತಿಯಿಂದ, ಐ ಕೇರ್ ಬ್ರಿಗೇಡ್, ಐ ಕೇರ್ ಫೌಂಡೇಷನ್ ಹಾಗೂ ಬಾರ್ಟನ್ ಸೆಂಟರ್ ಮಾಲೀಕರ ಸಂಘದ ಸಹಯೋಗದೊಂದಿಗೆ 70ನೇ ಕರ್ನಾಟಕ ರಾಜ್ಯೋತ್ಸವ ಹಾಗೂ ಜಯಕರ್ನಾಟಕ ಜನಪರ ವೇದಿಕೆಯ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ತಾಯಿ ಭುವನೇಶ್ವರಿಗೆ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ, ಕನ್ನಡ ಡಿಂಡಿಮ ಮೊಳಗಿಸಿ, ಕನ್ನಡ ಪತಾಕೆಯನ್ನು ಬಾನೆತ್ತರಕ್ಕೇರಿಸಿ, ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಮಹಾತ್ಮ ಗಾಂಧಿ ರಸ್ತೆಯಲ್ಲಿ ಕನ್ನಡ ತೇರಿನ ಜೊತೆಗೆ ಅದ್ದೂರಿ ಮೆರವಣಿಗೆಯನ್ನು ನಡೆಸುವ ಮೂಲಕ ಬಹಳ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಂತಿನಗರ ಶಾಸಕರು ಹಾಗೂ ಬಿಡಿಎ ಅಧ್ಯಕ್ಷರಾದ ಎನ್.ಎ.ಹ್ಯಾರಿಸ್ ರವರು, ಉಪ ಪೋಲಿಸ್ ಆಯುಕ್ತರಾದ ರಾಮಚಂದ್ರಪ್ಪ ರವರು, ಮಾಜಿ ಮಹಾ ಪೌರರಾದ ಗೌತಮ್ ರವರು, ಕನ್ನಡಪರ ಹೋರಾಟಗಾರಾದ ರೂಪೇಶ್ ರಾಜಣ್ಣ, ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ರಾಜೇಶ್ ರವರು, ಕೀರ್ತಿ ಗಣೇಶ್ ರವರು ದೇವರಾಜ್ ಅರಸು ನಿಗಮ ಮಂಡಳಿ ಅಧ್ಯಕ್ಷರು ಹಾಗೂ NSUI ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಕಲ್ಯಾಣ ಮಹಿಳಾ ರಾಜ್ಯಾಧ್ಯಕ್ಷೆ ಉಷಾ ಜಯಶ್ರೀ, ಚಿನ್ನಪ್ಪ ಡಿಸಿ, ಕ್ರಿಕೆಟ್ ಕಂಟ್ರೋಲ್ ರೂಂ,
ನಿವೃತ್ತ ಅರಣ್ಯ ಉಪ ಸಂರಕ್ಷಣಾ ಅಧಿಕಾರಿ ಮಾಣಿಕ್, ಮೋಹನ್
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಂಘದ ಅಧ್ಯಕ್ಷರು,
ಡಾ.ಸತೀಶ್ ಕುಮಾರ್ ಮುಖ್ಯಾಧಿಕಾರಿ ಆರೋಗ್ಯ ಇಲಾಖೆ, ಮೂಲ ನಿವಾಸಿ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ಮುನಿಮಾರಪ್ಪ, ನೇವಿ ಕರ್ನಲ್ಸ್, ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷರಾದ ಜೆ.ಶ್ರೀನಿವಾಸ್, ರಾಜ್ಯ ಕಾರ್ಯಾಧ್ಯಕ್ಷ ಹೆಚ್. ರಾಮಚಂದ್ರಯ್ಯ, ಬೆಂಗಳೂರು ಜಿಲ್ಲಾ ಅಧ್ಯಕ್ಷ ಪಿ.ಲೋಕೇಶ್, ರಾಜ್ಯ ಮಹಾ ಪ್ರಧಾನ ಸಂಚಾಲಕ ಶೆ.ಭೊ.ರಾಧಾಕೃಷ್ಣ, ಖಜಾಂಚಿ ಉದಯ್ ಶೆಟ್ಟಿ, ಉಪಾಧ್ಯಕ್ಷರಾದ ಕೆ.ಎನ್.ಜಗದೀಶ್, ರಾಜ್ಯ ಮಹಿಳಾ ಘಟಕದ ಅಧ್ಯಕ್ಷರಾದ ಜಿ.ಎಸ್.ಪುಷ್ಪಲತಾ, ರಾಜ್ಯ ಸಂಘಟನಾ ಕಾರ್ಯದರ್ಶಿ ಗೋಪಿ, ಕಿರಣ್ ಕುಮಾರ್, ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಸುನಂದಾ ರೆಡ್ಡಿ ಸೇರಿದಂತೆ ಬೆಂಗಳೂರು ಜಿಲ್ಲಾ, ವಿಧಾನಸಭಾ ಕ್ಷೇತ್ರ ಹಾಗೂ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಹೆಚ್ಚಿನ ಸಹಕಾರ ನೀಡಿದ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ, ಮಾಧ್ಯಮ ಸ್ನೇಹಿತರಿಗೆ ಹಾಗೂ ಹಗಳಿರುವ ಶ್ರಮಿಸಿದ ಜಯಕರ್ನಾಟಕ ಜನಪರ ವೇದಿಕೆಯ ಸಮಸ್ತ ಪದಾಧಿಕಾರಿಗಳಿಗೆ ಹಾಗೂ ಸ್ನೇಹಿತರಿಗೆ ಹೃದಯ ಪೂರ್ವಕ ಧನ್ಯವಾದಗಳು.
ಇಂತಿ ನಿಮ್ಮ:
ಜಯಕರ್ನಾಟಕ
ಜನಪರ ವೇದಿಕೆ.