11/06/2023
ರಾಜ್ಯದಾದ್ಯಂತ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸುವ "ಶಕ್ತಿ" ಯೋಜನೆಗೆ ಇಂದು ಚಾಲನೆ ನೀಡಲಾಯಿತು.
ಮಹಿಳಾ ಸಬಲೀಕರಣದತ್ತ ಕಾಂಗ್ರೆಸ್ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದ್ದು, ಇಂದಿನಿಂದ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಅಗತ್ಯ ದಾಖಲೆ ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದು. ಕೊಟ್ಟ ಮಾತಿನಂತೆ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಮಹಿಳೆಯರ ಅಭಿವೃದ್ಧಿಗೆ ಕಾಂಗ್ರೆಸ್ ಬದ್ಧವಾಗಿದೆ.
ಕಾಂಗ್ರೆಸ್ ಪಕ್ಷದ ಜನಪರ ಗ್ಯಾರಂಟಿಗಳನ್ನು ಹಂತ ಹಂತವಾಗಿ ಜನರಿಗೆ ನೀಡುವುದೇ ನಮ್ಮ ಉದ್ದೇಶವಾಗಿದ್ದು, ಅದಕ್ಕೆ ಬೇಕಾದ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಜನರಿಗೆ ಯಾವುದೇ ಅನುಮಾನ ಬೇಡ ಎನ್ನುವ ಭರವಸೆ ನೀಡಿದೆ.