09/10/2025
ಬಹುಮುಖ ಪ್ರತಿಭೆಯಿಂದ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ ಡಾ. ಶಿವರಾಮ ಕಾರಂತರ ಕೊಡುಗೆ ಅನನ್ಯ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಕಾರಂತರು ಪ್ರವೇಶಿಸದ ಕ್ಷೇತ್ರವಿಲ್ಲ. ಸಾಹಿತಿ, ಪತ್ರಕರ್ತ, ಸಾಮಾಜಿಕ ಕಾರ್ಯಕರ್ತ, ಯಕ್ಷಗಾನ ಕಲಾವಿದ ಮೊದಲಾದ ಕ್ಷೇತ್ರಗಳಲ್ಲಿ ಅವರು ತಮ್ಮ ಛಾಪು ಮೂಡಿಸಿದ್ದಾರೆ. ಶ್ರೀಯುತರ ಜನ್ಮದಿನದಂದು ಗೌರವ ನಮನಗಳು.